ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ : 10-12-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು-32,
ಹೌಸ್‌ಕೀಪಿಂಗ್ ಸ್ಟಾಫ್ ಹುದ್ದೆಗಳು-20,
ಮಾಲಿ ಹುದ್ದೆ-1,
ಸೂಪರ್‌ವೈಸರ್ ಹುದ್ದೆ-1
ಗಾರ್ಬೇಜ್ ಕಲೆಕ್ಟರ್ ಹುದ್ದೆ-1
ಒಟ್ಟು ಹುದ್ದೆಗಳು: 55
ವಿದ್ಯಾರ್ಹತೆ:
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು.
1) ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ತೇರ್ಗಡೆ ಹೊಂದಿರಬೇಕು.
2) ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 5ನೇ ತರಗತಿ ತೇರ್ಗಡೆ ಹೊಂದಿರಬೇಕು.
3) ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದಂತೆ ವೃತ್ತಿಯಲ್ಲಿ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ವೇತನಶ್ರೇಣಿ:
ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು ರೂ15,908/- ರಿಂದ 20,976/-ರೂಗಳ ವರೆಗೆ ವೇತನವನ್ನು ಪಡೆಯುವರು.
ಅರ್ಜಿ ಶುಲ್ಕ:
* ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹೌಸ್‌ಕೀಪಿಂಗ್ ಸ್ಟಾಫ್, ಮಾಲಿ, ಸೂಪರ್‌ವೈಸರ್ ಮತ್ತು ಗಾರ್ಬೇಜ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ750/-
-SC/ST/PH/Economically Backward ಅಭ್ಯರ್ಥಿಗಳು ರೂ450/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಡಿಸೆಂಬರ್ 2021
Website |
Notification |
Apply Online |