ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಒಟ್ಟು 376 ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಕೊನೆ ಎರಡು ದಿನಗಳಷ್ಟೇ ಬಾಕಿ ಇದೆ. ಆಸಕ್ತರು ಕೊನೆ ಕ್ಷಣದವರೆಗೆ ಕಾಯದೇ ಬೇಗ ಅರ್ಜಿ ಸಲ್ಲಿಸಿ.
ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್ ಮತ್ತು E-Wealth ರಿಲೇಷನ್‌ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕ ಪ್ರಕ್ರಿಯೆ ನಡೆಸಲಾಗುತ್ತಿದೆ. ಆಸಕ್ತ ಪದವೀಧರರು ಬೇಗ ಬೇಗ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ
ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್ : 326
ಇ-ವೆಲ್ತ್ ರಿಲೇಷನ್‌ಶಿಪ್ ಮ್ಯಾನೇಜರ್ : 50
ಬೆಂಗಳೂರಿನಲ್ಲಿ ಭರ್ತಿ ಮಾಡುವ ಹುದ್ದೆಗಳ ಸಂಖ್ಯೆ : 32
ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಿಂದ ವಿವಿಧ ಹುದ್ದೆಗಳ ನೇಮಕ: ಆನ್‌ಲೈನ್ ಅರ್ಜಿ ಹಾಕಿ
ಶೈಕ್ಷಣಿಕ ಅರ್ಹತೆ : ಯಾವುದೇ ವಿಷಯದಲ್ಲಿ ಡಿಗ್ರಿ ಪಾಸ್ ಮಾಡಿರಬೇಕು.
ವಯೋಮಿತಿ
ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 24 ವರ್ಷ.
ಇ-ವೆಲ್ತ್ ರಿಲೇಷನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 23 ವರ್ಷ.
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ಮೀರಿರಬಾರದು.
ಮಾಸಿಕ ರೂ.35,000 ದಿಂದ ರೂ.40,000 ವರೆಗೆ ಸಂಭಾವನೆ ಈ ಹುದ್ದೆಗಳಿಗೆ ಸಿಗಲಿದ್ದು,
ಅರ್ಜಿ ಶುಲ್ಕ
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.600.
SC / ST / PWD / ಮಹಿಳಾ ಅಭ್ಯರ್ಥಿಗಳಿಗೆ ರೂ.100.
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಬ್ಯಾಂಕ್ ಆಫ್ ಬರೋಡಾದ ದೇಶದ ವಿವಿಧ ಬ್ರ್ಯಾಂಚ್‌ಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ 32 ಹುದ್ದೆಗಳಿದ್ದು, ಇಲ್ಲಿನ ವಿವಿಧ ಬ್ರ್ಯಾಂಚ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭ ದಿನಾಂಕ: 19-11-2021
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 09-12-2021
ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 09-12-2021
Website |
Notification PDF |
Apply Online |