September 22, 2023

12ನೇ ಪಾಸಾದವರಿಗೆ ಕೇಂದ್ರದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ : Indian Coast Guard Recruitment 2021

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 50 ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 6,2021 ರಿಂದ ಡಿಸೆಂಬರ್ 17,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Telegram Group

ವಿದ್ಯಾರ್ಹತೆ
ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 1,1997 ರಿಂದ ಜುಲೈ 30,2021 ದಿನಾಂಕಗಳು ಸೇರಿದಂತೆ ಈ ದಿನಾಂಕಗಳ ನಡುವೆ ಜನಿಸಿರಬೇಕು.

ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 6,2021 ರಿಂದ ಡಿಸೆಂಬರ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಡಿಸೆಂಬರ್ 6,2021 ರಿಂದ ಡಿಸೆಂಬರ್ 17,2021ರೊಳಗೆ ಅರ್ಜಿಯನ್ನು ಹಾಕಬಹುದು
Website
Notification PDF
Apply Online
Telegram Group
error: Content is protected !!