September 30, 2023

`ಒಂದು ರಾಷ್ಟ್ರ ಒಂದು ಪಡಿತರ ಚೀಟಿ’ ಎನಿದು ಗೊತ್ತಾ?

`ಒಂದು ರಾಷ್ಟ್ರ ಒಂದು ಪಡಿತರ ಚೀಟಿ’
ಒನ್ ನೇಷನ್ ಒನ್ ರೇಷನ್ ಕಾರ್ಡ್ (ಒಎನ್‌ಆರ್‌ಸಿ) ಯೋಜನೆಯನ್ನು 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 75 ಕೋಟಿ ಫಲಾನುಭವಿಗಳನ್ನು ಒಳಗೊಳ್ಳಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಗುರುವಾರ ತಿಳಿಸಿದೆ.ಪಡಿತರ ಚೀಟಿದಾರರೇ ಗಮನಿಸಿ ಉದ್ಯೋಗ ಮತ್ತು ಇತರ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಬೇರೊಂದು ಸ್ಥಳಕ್ಕೆ ವಲಸೆ ಹೋಗುವವರಿಗೆ ಆಹಾರ ಭದ್ರತೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಜಾರಿಗೆ ತಂದಿದೆ.

Telegram Group



ರಾಷ್ಟ್ರದ ಯಾವುದೇ ರಾಜ್ಯದಲ್ಲಿ ಅಂತ್ಯೋದಯ ಅನ್ನ ಅಥವಾ ಆದ್ಯತಾ ಪಡಿತರ ಚೀಟಿ ಹೊಂದಿರುವವರು ರಾಷ್ಟ್ರದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿ ಸಂಖ್ಯೆ/ಆಧಾರ್ ಸಂಖ್ಯೆ ನೀಡಿ ಹೆಬ್ಬೆರಳಿನ ಜೀವಮುದ್ರೆ ನೀಡಿ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.
ರಾಷ್ಟ್ರದ ಯಾವುದೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿದ್ದರೂ ಅಂಥವರು ಯಾವುದೇ ರಾಜ್ಯದಲ್ಲಾದರೂ ಪಡಿತರ ಚೀಟಿ ಸಂಖ್ಯೆ/ಆಧಾರ್ ಸಂಖ್ಯೆ ಹೆಬ್ಬೆರಳಿನ ಮುದ್ರೆ ನೀಡುವ ಮೂಲಕ ಪಡಿತರ ಪಡೆಯಬಹುದು.



ಪಡಿತರ ಚೀಟಿದಾರರ ನೋಂದಣಿ ಹೇಗೆ?
ಭಾರತ ಸರ್ಕಾರದ ಮೇರಾ ರೇಷನ್ ಆಯಪ್ ಅಥವಾ ಸಹಾಯವಾಣಿ ಸಂಖ್ಯೆ 14445 ಕ್ಕೆ ಕರೆ ಮಾಡಿ.

Telegram Group
error: Content is protected !!