September 30, 2023

ಟಿ20 ಪಂದ್ಯದಲ್ಲಿ ಶ್ರೇಯಸ್ ’ಹ್ಯಾಟ್ರಿಕ್’; ಭಾರತ ಕ್ಲೀನ್‌ಸ್ವೀಪ್

ಶ್ರೀಲಂಕಾ ವಿರುದ್ಧ ಭಾರತದ ಕ್ಲೀನ್ ಸ್ವೀಪ್

Telegram Group
ಹಿಮಾಚಲಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕ ದಸನ್ ಶನಕ (74ರನ್, 38 ಎಸೆತ, 9 ಬೌಂಡರಿ, 2 ಸಿಕ್ಸರ್) ಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ 5 ವಿಕೆಟ್ ಗೆ 146 ರನ್ ಗಳನ್ನು ಕಲೆಹಾಕಿತು.

 

 

ಇದನ್ನು ಬೆನ್ನತ್ತಿದ ಭಾರತ ತಂಡ 51 ರನ್‌ಗಳಿಗೇ ಎರಡು ವಿಕೆಟ್ ಕಳೆದುಕೊಂಡಿತು. ಸತತ ಮೂರನೇ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯನ್ನ 3-0ಯಿಂದ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.

ಶ್ರೇಯಸ್ (ಅಜೇಯ 73; 45ಎ, 9ಬೌಂಡರಿ, 1ಸಿಕ್ಸರ್) ಮತ್ತೆ ಮಿಂಚಿದರು. ಎದುರಾಳಿ ಬೌಲರ್‌ಗಳ ಬೆವರಿಳಿಸಿದರು. ರವೀಂದ್ರ ಜಡೇಜ (ಅಜೇಯ22) ಕೂಡ ಮಿಂಚಿದರು. ಇದರಿಂದಾಗಿ ತಂಡವು 19 ಎಸೆತಗಳು ಬಾಕಿಯಿರುವಾಗಲೇ ಜಯಿಸಿತು. ಶ್ರೇಯಸ್ ಈ ಸರಣಿಯಲ್ಲಿ 200ಕ್ಕೂ ಹೆಚ್ಚು ರನ್‌ ಗಳಿಸಿದ ಸಾಧನೆ ಮಾಡಿದರು.

ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಸತತ ಮೂರು ಅರ್ಧಶತಕ ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್‌ ಶರ್ಮಾ ಮತ್ತು ಕೆಎಲ್‌ ರಾಹುಲ್‌ ಈ ಸಾಧನೆ ಮೆರೆದಿದ್ದಾರೆ.

 

 

Telegram Group
error: Content is protected !!