December 5, 2022

ಅಸಿಸ್ಟೆಂಟ್ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – UAS Dharwad Recruitment 2022

ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ 2022

UAS Dharwad Recruitment 2022: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ವಿವಿಧ ಡಿಪ್ಲೊಮ (ಕೃಷಿ/ ಅರಣ್ಯ) ಮಹಾವಿದ್ಯಾಲಯಗಳಲ್ಲಿ ಅಗತ್ಯ ಇರುವ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

 

ಇಲಾಖೆ ಹೆಸರು: ಕೃಷಿ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು: ಟೆಕ್ನಿಕಲ್ ಅಸಿಸ್ಟಂಟ್
ಒಟ್ಟು ಹುದ್ದೆಗಳು  8
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಕೃಷಿ ಪದವಿಯನ್ನು ಶೇಕಡ.55 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು. ಡಿಪ್ಲೊಮ (ಫಾರೆಸ್ಟ್ರಿ) ಕಾಲೇಜಿಗೆ, ಫಾರೆಸ್ಟ್ರಿ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳು 
ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 38 ವರ್ಷಗಳು 
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷಗಳು 

 

 

ಉದ್ಯೋಗ ಸ್ಥಳ
ಧಾರವಾಡ ಡಿಪ್ಲೊಮ (ಕೃಷಿ) ಕಾಲೇಜು.
ವಿಜಯಪುರ ಡಿಪ್ಲೊಮ (ಕೃಷಿ) ಕಾಲೇಜು
ಕುಮಟಾ ಡಿಪ್ಲೊಮ (ಕೃಷಿ) ಕಾಲೇಜು
ಜಮಖಂಡಿ ಡಿಪ್ಲೊಮ (ಕೃಷಿ) ಕಾಲೇಜು
ನಿಪ್ಪಣಿ ಡಿಪ್ಲೊಮ (ಕೃಷಿ) ಕಾಲೇಜು
ಹನುಮನಹಟ್ಟಿ ಡಿಪ್ಲೊಮ (ಕೃಷಿ) ಕಾಲೇಜು
ಕೊಣ್ಣೂರು ಡಿಪ್ಲೊಮ (ಕೃಷಿ) ಕಾಲೇಜು
ಮಲಜಿ ಡಿಪ್ಲೊಮ (ಫಾರೆಸ್ಟ್ರಿ) ಕಾಲೇಜು

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಧೃಢೀಕೃತ ಎರಡು ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಹಾಜರಾಗಬೇಕು. ಸದರಿ ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ, ಯಾವುದೇ ಸಮಯದಲ್ಲಿ ಕಾರಣ ತಿಳಿಸದೇ ಕೆಲಸದಿಂದ ತೆಗೆಯಬಹುದು. ಇದು ಕೃಷಿ ವಿವಿಯ ಯಾವುದೇ ಖಾಯಂ ನೇಮಕಾತಿ ಅಲ್ಲ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ
ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನಮೂದಿಸಿದ ಅರ್ಜಿ ನಮೂನೆಯಲ್ಲಿ ಸ್ವವಿವರಗಳನ್ನು ಭರ್ತಿ ಮಾಡಿದ ಎರಡು ಪ್ರತಿಗಳೊಂದಿಗೆ ದಿನಾಂಕ
06-04-2022 ರಂದು ಬೆಳಿಗ್ಗೆ 10-00 ಗಂಟೆಗೆ, ಡೀನ್ (ಸ್ನಾತಕೋತ್ತರ) ರವರ ಕಛೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.

 

 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!