November 29, 2022

ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ 2022 । KIOCL Recruitment 2022

ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ 2022 

KIOCL Recruitment 2022: ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಎಲೆಕ್ಟ್ರಿಕಲ್ ಇಂಜಿನಿಯರ್, ಇನ್ ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

Telegram Group

ಇಲಾಖೆ ಹೆಸರು: ಕಬ್ಬಿಣ ಅದಿರು ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  09
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:
ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ಈ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಿ.ಇ /ಬಿ.ಟೆಕ್ / ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 28/02/2022ರ ಅನ್ವಯ ಗರಿಷ್ಟ 32 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 


 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ರಿಂದ 1,12,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಆಯ್ಕೆ ವಿಧಾನ:
ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ಈ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ವೃತ್ತಿಅನುಭವ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ:
ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್,
2ನೇ ಬ್ಲಾಕ್, ಕೊರಮಂಡಲ,
ಬೆಂಗಳೂರು-560034.

 


 

ಪ್ರಮುಖ ದಿನಾಂಕಗಳು

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರ್, ಇನ್ ಸ್ಟ್ರುಮೆಂಟೇಷನ್ ಆಂಡ್ ಕಂಟ್ರೋಲ್ ಇಂಜಿನಿಯರ್ ಹುದ್ದೆಗಳಿಗೆ ದಿನಾಂಕ 11/04/2022 ರಂದು ಬೆಳ್ಳಿಗೆ 09:30 ಘಂಟೆಗೆ ಮತ್ತು ಮೆಕ್ಯಾನಿಕಲ್ ಇಂಜಿನಿಯರ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ದಿನಾಂಕ 12/04/2022 ರಂದು ಬೆಳ್ಳಿಗೆ 09:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 


Telegram Group
error: Content is protected !!