December 8, 2022

ಕಿರಿಯ ಸಹಾಯಕ , ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿ

Telegram Group

Karnataka Legislative Assembly Recruitment 2022: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಕರ್ನಾಟಕ ವಿಧಾನಸಭೆ ಸಚಿವಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  43
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ವರದಿಗಾರರು – ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಆಪರೇಟರ್ – ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಬ್ಯಾಚುಲರ್ಸ್ ಪದವಿ (ಬಿ.ಸಿ.ಎ) ಅಥವಾ ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಪದವಿ ಪಡೆದಿರಬೇಕು.

ಕಿರಿಯ ಸಹಾಯಕರು – ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ ಹೊಂದಿರಬೇಕು.

ಬೆರಳಚ್ಚುಗಾರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದವರಿಗೆ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಗಣಕಯಂತ್ರದ ಕನಿಷ್ಠ 1 ವರ್ಷದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ದಲಾಯತ್ – 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

 

 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

 

ವೇತನಶ್ರೇಣಿ:

ಹುದ್ದೆಗಳು  ವೇತನಶ್ರೇಣಿ 
ವರದಿಗಾರರು ರೂ.37900/- ರೂ.70850
ಕಂಪ್ಯೂಟರ್ ಆಪರೇಟರ್ ರೂ.37900-ರೂ.70850
ಕಿರಿಯ ಸಹಾಯಕರು ರೂ.21400-ರೂ.42000
ಬೆರಳಚ್ಚುಗಾರರು ರೂ.21400-ರೂ.42000
ದಲಾಯತ್ ರೂ.17000-ರೂ.28950

 

ಅರ್ಜಿ ಶುಲ್ಕ:
ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ,

ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಏಪ್ರಿಲ್ 26, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮೇ 27, 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!