September 22, 2023

IDBI ಬ್ಯಾಂಕಿನಲ್ಲಿ 1544 ಖಾಲಿ ಹುದ್ದೆಗಳು । IDBI Bank Recruitment 2022

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯಾ ನೇಮಕಾತಿ  2022

IDBI Bank Recruitment 2022: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯಾವು (ಐಡಿಬಿಐ) ಎಕ್ಸಿಕ್ಯೂಟಿವ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯಾ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  1544 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಐಡಿಬಿಐ ಎಕ್ಸಿಕ್ಯೂಟಿವ್ ಹುದ್ದೆಗಳು: 1044
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳು: 500

ವಿದ್ಯಾರ್ಹತೆ:
ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್‌ ಆಫ್‌ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮ ಮತ್ತು ಗ್ರಾಜುಯೇಟ್‌ ಪಾಸ್‌ ಮಾಡಿರಬೇಕು.

ವಯೋಮಿತಿ:
ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000.
ಒಬಿಸಿ ಅಭ್ಯರ್ಥಿಗಳಿಗೆ ರೂ.1000.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.200.
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌ ಇತರೆ ಆನ್‌ಲೈನ್‌ ಪೇಮೆಂಟ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ ನಡೆಸಿ ಆಯ್ಕೆ ನಡೆಸಲಾಗುತ್ತದೆ. ರೀಸನಿಂಗ್, ಮೆಂಟಲ್ ಎಬಿಲಿಟಿ, ಇಂಗ್ಲಿಷ್‌, ಗಣಿತ ವಿಷಯಗಳ ಕುರಿತು ಪರೀಕ್ಷೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  03-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17-06-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!