September 22, 2023

SSLC ಪಾಸಾದವರಿಗೆ ಚಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ ನೇಮಕಾತಿ 2022

KSAT Recruitment 2022 : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಖಾಲಿ ಇರುವ ಉಳಿದ ಮೂಲ ವೃಂದದ ಎರಡು ವಾಹನ ಚಾಲಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿ
ಹುದ್ದೆಗಳ ಹೆಸರು: ವಾಹನ ಚಾಲಕರು
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:
10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದಿರುವ ಚಾಲ್ತಿಯಲ್ಲಿರುವ ಲಘು/ಭಾರಿ ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ
ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ದಿಂದ ರೂ. 42,000 ವರೆಗೂ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪ.ಜಾತಿ, ಪ.ಪಂ., ಪ್ರ 1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಸಿದೆ. ಇತರೆ ಅಭ್ಯರ್ಥಿಗಳು ರೂ. 150 ಗಳನ್ನು ಐಪಿಒ/ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು – 560009” ಇವರ ಹೆಸರಿಗೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಆಯ್ಕೆ ವಿಧಾನ:
ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 30 ಅಂಕಗಳನ್ನು ಒಳಗೊಂಡಿರುತ್ತದೆ. ಸದರಿ ಆಯ್ಕೆಯು ಪೊಲೀಸ್ ವಾಹನ ಚಾಲನ ಮತ್ತು ನಿರ್ವಹಣಾ ಶಾಖೆಯು ನಡೆಸುವ ವಾಹನ ಚಾಲನ ಪರೀಕ್ಷೆಗೆ ಒಳಪಟ್ಟಿರುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,

ಕಂದಾಯ ಭವನ, 7ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು – 560009

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್ 07, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜೂನ್ 22, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!