May 28, 2023

SDA ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ : ಸಂಬಳ – ರೂ. 42,000/-

ಜಲ ಸಂಪನ್ಮೂಲ ಇಲಾಖೆ ನೇಮಕಾತಿ ಅಧಿಸೂಚನೆ 2022

Water Resources Department Karnataka Recruitment 2022: ಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಜಲ ಸಂಪನ್ಮೂಲ ಇಲಾಖೆ
ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ (ಗ್ರೂಪ್-ಸಿ ವೃಂದ)
ಒಟ್ಟು ಹುದ್ದೆಗಳು  155
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
– ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆ.
– ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ
– ಮೂರು ವರ್ಷಗಳ ಡಿಪ್ಲೊಮಾ ಅಥವಾ ಎರಡು ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ ಅಭ್ಯರ್ಥಿಗಳು ಎನ್.ಐ.ಓ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ  ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ವಯೋಮಿತಿಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅಗಸ್ಟ್ 10, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 


Telegram Group
error: Content is protected !!