March 20, 2023

ವಾರ್ಡನ್ ಹುದ್ದೆಗಳ ನೇರ ನೇಮಕಾತಿ 2022

ವಾರ್ಡನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

Sri Gavimath Koppal Recruitment 2022: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಬಾಲಕರ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ ಅಗತ್ಯವಿರುವ ವಾರ್ಡನ್ ಹುದ್ದೆ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ
ಹುದ್ದೆಗಳ ಹೆಸರು: ವಾರ್ಡನ್ ಹುದ್ದೆ ಭರ್ತಿ
ಒಟ್ಟು ಹುದ್ದೆಗಳು  ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ, ಡಿ.ಇಡಿ, ಸಿ.ಪಿ.ಎಡ್, ಬಿ.ಇಡಿ, ಬಿ.ಪಿ.ಎಡ್, ಎಮ್.ಎಸ್.ಡಬ್ಲೂ, ಎಮ್.ಎ ಅಥವಾ ಎಮ್.ಕಾಮ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಶಿಕ್ಷಣ ಸಂಸ್ಥೆಯಲ್ಲಿ ಸೇವಾನುಭವ ಹೊಂದಿರಬೇಕು.
ಕಲಿಕಾ ಆಸಕ್ತಿಯುಳ್ಳವರಾಗಿರಬೇಕು ಮತ್ತು ಮಕ್ಕಳನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರಬೇಕು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ :
ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು  ಬಯೋಡಾಟಾ ಮತ್ತು ಶೈಕ್ಷಣಿಕ ದಾಖಲಾತಿಗಳನ್ನು ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು ಮತ್ತು ಇನ್ನೊಂದು ಪ್ರತಿಯನ್ನು ಇಮೇಲ್ ವಿಳಾಸಕ್ಕೆ ಸಲ್ಲಿಸಬೇಕು.

ಉದ್ಯೋಗ ಸ್ಥಳ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶ್ರೀ ಗವಿಸಿದ್ಧೇಶ್ವರ ಬಾಲಕರ ಉಚಿತ ಹಾಗೂ ಪ್ರಸಾದ ನಿಲಯ ಕೊಪ್ಪಳದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಆಡಳಿತಾಧಿಕಾರಿಗಳು, ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠ,
ಕೊಪ್ಪಳ – 583231 ಫೊನ್ – 08539220212

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜುಲೈ 25, 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!