December 7, 2022

KPSC ನೇಮಕಾತಿ ಅಧಿಸೂಚನೆ 2022 : ಗ್ರೂಪ್ ಬಿ ಹುದ್ದೆಗಳ ಭರ್ತಿ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್ ಬಿ ಹುದ್ದೆಗಳ ಭರ್ತಿ 

KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಅಗತ್ಯವಿರುವ ಗ್ರೂಪ್-ಬಿ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ಸಹಾಯಕ ವಿದ್ಯುತ್ ಪರಿವೀಕ್ಷಕರು (ಗ್ರೂಪ್-ಬಿ)
ಒಟ್ಟು ಹುದ್ದೆಗಳು  30
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು. 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 25, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 23, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 24, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!