November 29, 2022

12 ನೇ ಪಾಸಾದವರಿಗೆ ಖಾಲಿ ಹುದ್ದೆಗಳ ಭರ್ತಿ : ಸಂಬಳ ರೂ. 27,650 /-

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 

ಬೆಂಗಳೂರು ಗ್ರಾಮಾಂತರ  ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಬೆಂಗಳೂರು ಗ್ರಾಮಾಂತರ  ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು
ಒಟ್ಟು ಹುದ್ದೆಗಳು  20
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್ 28, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜುಲೈ 27, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!