November 29, 2022

SSLC PUC ಪಾಸಾದವರಿಗೆ ಖಾಲಿ ಹುದ್ದೆಗಳು 2022 । ವಿವಿಧ ಹುದ್ದೆಗಳ ಭರ್ತಿ

ವಿಜಯಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022

Vijayapura District Court Recruitment 2022: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ
ಹುದ್ದೆಗಳ ಹೆಸರು: ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಒಟ್ಟು ಹುದ್ದೆಗಳು  28
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಬೆರಳಚ್ಚು ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ಶ್ರೇಣಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400 / ರೂ.42000/-


ಆದೇಶ ಜಾರಿಕಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು/ಭಾರಿ ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19950/ ರೂ.37900/-

ಜವಾನರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17000/ ರೂ.28950/-

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

(ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ  ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗೆಳಿಗೆ  10ನೇ ತರಗತಿಯಲ್ಲಿ  ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್ 25, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜುಲೈ 24, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ಬೆರಳಚ್ಚುಗಾರ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಆದೇಶ ಜಾರಿಕರ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಜವಾನ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!