ಬೆಳಗಾವಿ ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2022
Belagavi Zilla Panchayat Recruitment 2022: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ ತಾಲ್ಲೂಕುಗಳಲ್ಲಿ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ
ಹುದ್ದೆಗಳ ಹೆಸರು : ಭೇರ್ ಪೂಟ್ ಟೆಕ್ನೀಷಿಯನ್ (ಬಿ.ಎಫ್.ಟಿ)
ಒಟ್ಟು ಹುದ್ದೆಗಳು : 19
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ ಮೂಲಕ
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ಗೌರವಧನ ಮತ್ತು ಪ್ರಯಾಣ ಭತ್ಯೆ ರೂ. 2,000 ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯ ಅಥಣಿ, ಬೆಳಗಾವಿ, ಗೋಕಾಕ, ಹುಕ್ಕೇರಿ, ಕಾಗವಾಡ, ಖಾನಾಪುರ, ಮೂಡಲಗಿ, ನಿಪ್ಪಾಣಿ, ರಾಯಬಾಗ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 24, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 07, 2022
ಮೂಲ ದಾಖಲಾತಿ ಪರಿಶೀಲನೆ ದಿನಾಂಕ ಸೆಪ್ಟೆಂಬರ್ 19, 2022
ಪ್ರಮುಖ ಲಿಂಕುಗಳು |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |