May 28, 2023

SBI ನಲ್ಲಿ 5008 ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ 2022 : SBI Clerk Junior Associate Notification 2022

 

Telegram Group

SBI Clerk Junior Associate Notification 2022: ಭಾರತೀಯ ಸ್ಟೇಟ್ ಬ್ಯಾಂಕ್ 5008 ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಸೆಪ್ಟೆಂಬರ್ 07 ರಿಂದ 27 ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು  5008 (ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ 316 )
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ವಿಶೇಷ ಸೂಚನೆ
ಯಾವುದೇ ಪದವಿಯ ಅಂತಿಮ ಸೆಮಿಸ್ಟರ್‌ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ವಯೋಮಿತಿ:
ದಿನಾಂಕ 01-08-2022 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.

ವೇತನಶ್ರೇಣಿ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  ರೂ.17900 – 47920.

ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ / ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪ್ರಿಲಿಮ್ಸ್‌ ಪರೀಕ್ಷೆ, ಮೇನ್ಸ್‌ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಿಲಿಮ್ಸ್‌ / ಮೇನ್ಸ್‌ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್‌ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  07-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27-09-2022
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!