September 30, 2023

ಕ್ಲರ್ಕ್ (ಸಹಾಯಕರು) ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ: ಉದ್ಯೋಗಾವಕಾಶ

KCC Bank Dharwad Recruitment 2022: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಧಾರವಾಡ ಇದರಲ್ಲಿ ಖಾಲಿ ಇರುವ ಕ್ಲರ್ಕ್ (ಸಹಾಯಕರು) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು: ಕ್ಲರ್ಕ್ (ಸಹಾಯಕರು)
ಒಟ್ಟು ಹುದ್ದೆಗಳು  87
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಕನಿಷ್ಠ ಶೇಕಡ 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪ.ಜಾತಿ/ ಪ.ಪಂ./ಪ್ರ1 ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 55% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಶನ್ ಮತ್ತು ಅಪ್ಲಿಕೇಶನ್ ನಲ್ಲಿ ಜ್ಞಾನ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಮಾಜಿ ಸೈನಿಕ (15 ವರ್ಷ ಸೇವೆ ಸಲ್ಲಿಸಿರಬೇಕು) ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,000 ರಿಂದ ರೂ. 29,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1180 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ ವಿಧವಾ ಅಭ್ಯರ್ಥಿಗಳು ರೂ. 590 ಶುಲ್ಕ ಪಾವತಿಸಬೇಕು.

(ನಿಗದಿತ ಶುಲ್ಕವನ್ನು ಅಧಿಸೂಚನೆಯಲ್ಲಿ ನೀಡಿದ ಬ್ಯಾಂಕಿನ ಖಾತೆಗೆ ನೆಪ್ಟ್ (ನೆಫ್ಟ್) ಮೂಲಕ ಜಮಾ ನೀಡಿ ಯುಟಿಆರ್ ನಂಬರ್ ನ್ನು ಆನ್ಲೈನ್ ಅಪ್ಲಿಕೇಶನ್ ಪಾರ್ಮ್ ನಲ್ಲಿ ನಮೂದಿಸಿ ಚಲನ್ ಪ್ರತಿ ಅಪ್ಲೋಡ್ ಮಾಡತಕ್ಕದ್ದು.)

ಆಯ್ಕೆ ವಿಧಾನ:
ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಪದವಿ ಎಲ್ಲಾ ಸೆಮಿಸ್ಟರ್/ ವರ್ಷಗಳವಾರು ಪರೀಕ್ಷೆಯಲ್ಲಿ ಪಡೆದ ನಿಗದಿತ ಅಂಕಗಳ ಪ್ರತಿಶತ ಆಧಾರದ ಮೇಲೆ ಅರ್ಹತೆ ಇರುವ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡ 85 ಕ್ಕಿಳಿಸಿ ಪ್ರಾಪ್ತವಾಗುವ ಅಂಕಗಳ ಶೇಕಡಾವಾರು ಪ್ರಮಾಣದ ಜೊತೆಗೆ ಸಂದರ್ಶನದಲ್ಲಿ ಪ್ರಾಪ್ತವಾಗುವ ಅಂಕಗಳನ್ನು ಕೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಸೆಪ್ಟೆಂಬರ್ 06, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಸೆಪ್ಟೆಂಬರ್ 30, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!