UAS Dharwad Recruitment 2022: ವಿಜಯಪುರ ಕೃಷಿ ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಅಧಿಸೂಚನೆ ಹೊರಡಿಸಿದೆ. ನೇರ ನೇಮಕಾತಿ ಮೂಲಕ ಲೈಬ್ರರಿ ಸಹಾಯಕರ ಹುದ್ದೆ ಭರ್ತಿಗೆ ಮುಂದಾಗಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆಗಳ ಹೆಸರು: | ಗ್ರಂಥಾಲಯ ಸಹಾಯಕ |
ಒಟ್ಟು ಹುದ್ದೆಗಳು | 2 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ವಿದ್ಯಾರ್ಹತೆ:
ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಯು ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವೇತನಶ್ರೇಣಿ:
ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14000 /- ವೇತನ ನಿಗದಿಪಡಿಸಲಾಗಿದೆ.
ನೇರ ಸಂದರ್ಶನ ನಡೆಸುವ ಸ್ಥಳ
ಸಂದರ್ಶನ ಕೊಠಡಿ, ಡೀನ್ (ಕೃಷಿ), ಕೃಷಿ ವಿಶ್ವವಿದ್ಯಾಲಯ, ವಿಜಯಪುರ, ಕರ್ನಾಟಕ
ಅಗತ್ಯ ದಾಖಲಾತಿಗಳು
ನೇರ ಸಂದರ್ಶನದ ದಿನ ನೀಡುವ ನಿಗದಿತ ಅರ್ಜಿಯನ್ನು ಅಭ್ಯರ್ಥಿಗಳು ಭರ್ತಿ ಮಾಡಬೇಕಿದೆ. ಇದರ ಜೊತೆಗೆ ಈ ದಾಖಲೆಗಳನ್ನು ಲಗತ್ತಿಸುವುದು ಅವಶ್ಯವಾಗಿದೆ.
-ಎರಡು ಪಾಸಪೋರ್ಸ್ ಸೈಜ್ ಫೋಟೋ
-ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್ಎಸ್ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
-ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರ
ಕರ್ನಾಟಕದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು: ಸಂದರ್ಶನ ಕೊಠಡಿ, ಡೀನ್ (ಕೃಷಿ), ಕೃಷಿ ವಿಶ್ವವಿದ್ಯಾಲಯ, ವಿಜಯಪುರ, ಕರ್ನಾಟಕ 07 ರಂದು -ಅಕ್ಟೋ-2022 10:30 AM.
ಪ್ರಮುಖ ದಿನಾಂಕಗಳು |
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ | 22ಸೆಪ್ಟೆಂಬರ್ -2022 |
ವಾಕ್-ಇನ್ ದಿನಾಂಕ | 07 ಅಕ್ಟೋಬರ್ 2022ರ ಬೆಳಗ್ಗೆ 10:30ಕ್ಕೆ |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |