September 30, 2023

ರೈಲ್ವೆ ಇಲಾಖೆಯಲ್ಲಿ 3115 ಖಾಲಿ ಹುದ್ದೆಗಳು – Eastern Railway recruitment 2022

Eastern Railway recruitment 2022: ಪೂರ್ವ ರೈಲ್ವೆಯ ನೇಮಕಾತಿ ಮಂಡಳಿಯು ಇದೀಗ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಆಫರ್ ನೀಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  3115
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಅಪ್ರೆಂಟಿಸ್‌ ಡಿವಿಷನ್‌ವಾರು ಹುದ್ದೆಗಳ ವಿವರ
ಔರಾ ಡಿವಿಷನ್ : 659
ಲಿಲುಹ ವರ್ಕ್‌ಶಾಪ್‌: 612
ಸೀಲ್ದ ಡಿವಿಷನ್ : 440
ಕಂಚ್ರಪರ ವರ್ಕ್‌ಶಾಪ್‌: 187
ಮಾಲ್ಡ ಡಿವಿಷನ್ : 138 
ಅಸನ್‌ಸೋಲ್ ವರ್ಕ್‌ಶಾಪ್‌: 412
ಜಮಲ್ಪುರ್ ವರ್ಕ್‌ಶಾಪ್‌ : 667

ವಿದ್ಯಾರ್ಹತೆ:
ಅಭ್ಯರ್ಥಿಗಳು 10ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್‌ನಲ್ಲಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 15 ವರ್ಷ ಆಗಿರಬೇಕು.
ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
(ಒಬಿಸಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)

ಅರ್ಜಿ ಶುಲ್ಕ:
ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100 ನಿಗದಿ ಮಾಡಲಾಗಿದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್‌ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್‌ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  29-10-2022
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!