December 5, 2022

ಗ್ರಾಮ ಪಂಚಾಯಿತಿಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು : Gram Panchayat Recruitment 2022

Telegram Group

Bangalore Rural Gram Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಗಳ ವಿವರ :
ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ (ಜವಾನ), ಕ್ಲೀನರ್ (ಸ್ವಚ್ಛತಾಗಾರ)

ಉದ್ಯೋಗ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 65 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಕರವಸೂಲಿಗಾರರು 3
ಡಾಟಾ ಎಂಟ್ರಿ ಆಪರೇಟರ್ 3
ಅಟೆಂಡೆಂಟ್ 10
ಕ್ಲೀನರ್ 49

ಶೈಕ್ಷಣಿಕ ವಿದ್ಯಾರ್ಹತೆ :
ಕರವಸೂಲಿಗಾರರು – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಅಟೆಂಡೆಂಟ್ ಹಾಗೂ ಕ್ಲೀನರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ.

ವಯೋಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಹಿಂ. ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ :
ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

 ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 200
ಪ‌.ಜಾತಿ, ಪ.ಪಂ. ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನಿಗಧಿತ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 30, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 20, 2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!