September 22, 2023

ದಕ್ಷಿಣ ರೈಲ್ವೆಯಲ್ಲಿ 3154 ಖಾಲಿ ಹುದ್ದೆಗಳು – Southern Railway Recruitment  2022

Telegram Group

Southern Railway Recruitment  2022 – ದಕ್ಷಿಣ ರೈಲ್ವೆಯ ಪೆರಂಬೂರ್, ತ್ರಿಚಿ, ಪೊಡನೂರು ವಲಯಗಳಲ್ಲಿ ಬೃಹತ್‌ ಸಂಖ್ಯೆಯ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ದಕ್ಷಿಣ ರೈಲ್ವೆ
ಹುದ್ದೆಗಳ ಹೆಸರು: ಅಪ್ರೆಂಟಿಸ್ (ತರಬೇತುದಾರರು)
ಒಟ್ಟು ಹುದ್ದೆಗಳು  3154
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು 10ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್‌ನಲ್ಲಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.
(ಫಿಟ್ಟರ್, ವೆಲ್ಡರ್, ರೇಡಿಯಾಲಜಿ, ಕಾರ್ಪೆಂಟರ್, ಮಷಿನಿಸ್ಟ್‌, ಪೇಂಟರ್, ಎಂಎಂವಿ, ಇಲೆಕ್ಟ್ರೀಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪಾಸ್ಸಾ, ವೈಯರ್‌ಮನ್, ಟರ್ನರ್, ಅಡ್ವಾನ್ಸ್‌ಡ್ ವೆಲ್ಡರ್, ಕಾರ್ಪೆಂಟರ್ ಟ್ರೇಡ್‌ಗಳಲ್ಲಿ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.)

ವಯೋಮಿತಿ:
ಕನಿಷ್ಠ 15 ವರ್ಷ ಆಗಿರುವ, ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಒಬಿಸಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಜೆನೆರಲ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಶುಲ್ಕ ರೂ.100. ಇತರೆ ವರ್ಗಗಳ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್‌ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್‌ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ sr.indianrailways.gov.in ಗೆ ಭೇಟಿ ನೀಡಬಹುದು.
ನೀಡಿರುವ ಸೈಟ್ ವಿಳಾಸದ ಮೇಲೆ ಕ್ಲಿಕ್ ಮಾಡಿ ಮತ್ತು ನೀಡಿರುವ ಅಧಿಸೂಚನೆಯ ವಿವರಗಳನ್ನು ಪರಿಶೀಲಿಸಿ.
ಆನ್‌ಲೈನ್‌ನಲ್ಲಿ ನೋಂದಾಯಿಸಿದ ನಂತರ, ಅಭ್ಯರ್ಥಿಗಳು ಭವಿಷ್ಯದ ಉಲ್ಲೇಖಕ್ಕಾಗಿ ಮುದ್ರಣವನ್ನು ತೆಗೆದುಕೊಳ್ಳಲು ಸೂಚಿಸಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಅರ್ಜಿ ಆನ್‌ಲೈನ್ ವಿಭಾಗದಲ್ಲಿ ಕೆಳಗೆ ನೀಡಲಾದ ಅಧಿಕೃತ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31-10-2022 ರ ಸಂಜೆ 05 ಗಂಟೆವರೆಗೆ.

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Telegram Group
error: Content is protected !!