December 8, 2022

1591 ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ 2022 – KSP Recruitment 2022

ಕರ್ನಾಟಕ ರಾಜ್ಯ ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ ಅಧಿಸೂಚನೆ ಪ್ರಕಟ 

KSP Civil Police Constable Recruitment 2022 : ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಪೊಲೀಸ್ ಕಾನ್ಸ್‌ಟೇಬಲ್‌ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು: ಪೊಲೀಸ್ ಕಾನ್ಸ್‌ಟೇಬಲ್‌ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು  ಒಟ್ಟು 1591 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಕಲ್ಯಾಣ ಕರ್ನಾಟಕ  454 ಹುದ್ದೆಗಳು 
ಉಳಿದ ವೃಂದದ ಹುದ್ದೆಗಳು  1137 ಹುದ್ದೆಗಳು 

ವಿದ್ಯಾರ್ಹತೆ:
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ  ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022ಕ್ಕೆ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ  ಪ್ರಕಾರ ಅಭ್ಯರ್ಥಿಗಳು ದಿನಾಂಕ 21 ನವೆಂಬರ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.

ಇದನ್ನೂ ಓದಿ – ಕೆಪಿಎಸ್ಸಿ ಇಂದ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವೇತನಶ್ರೇಣಿ:
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ  ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ  ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 
 ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 400
ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ. 200
(ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮುಖಾಂತರ ಪಾವತಿಸಬಹುದು ಹಾಗೂ ಚಲನ್ ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.)

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ  ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

  • ಮೊದಲನೆಯದಾಗಿ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಕರ್ನಾಟಕ ರಾಜ್ಯ ಪೊಲೀಸ್ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ – ಕೆಳಗೆ ನೀಡಲಾಗಿದೆ ಲಿಂಕ್.
    ಕರ್ನಾಟಕ ರಾಜ್ಯ ಪೊಲೀಸ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 20, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 21, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ನವೆಂಬರ್ 23, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  – 2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!