September 22, 2023

ಜಲ ಸಂಪನ್ಮೂಲ ಇಲಾಖೆ ನೇಮಕಾತಿ 2022 – Water Resource Dept JE Recruitment 2022

ಕರ್ನಾಟಕ ಲೋಕಸೇವಾ ಆಯೋಗದ ಹೊಸ ನೇಮಕಾತಿ ಅಧಿಸೂಚನೆ 2022

Water Resource Dept JE Recruitment 2022 – ಜಲ ಸಂಪನ್ಮೂಲ ಇಲಾಖೆಯಲ್ಲಿನ ಹೈದೆರಾಬಾದ್ ಕರ್ನಾಟಕ ವೃಂದದಲ್ಲಿನ ಗ್ರೂಪ್‌ ಸಿ ಕಿರಿಯ ಇಂಜಿನಿಯರ್ (ಸಿವಿಲ್), (ಮೆಕ್ಯಾನಿಕಲ್) ಹುದ್ದೆಗಳ ಭರ್ತಿಗೆ ಇದೀಗ ಕೆಪಿಎಸ್‌ಸಿ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)
ಹುದ್ದೆಗಳ ಹೆಸರು: ಕಿರಿಯ ಇಂಜಿನಿಯರ್ (ಗ್ರೂಪ್‌ ಸಿ)
ಒಟ್ಟು ಹುದ್ದೆಗಳು  169
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ

ಕಿರಿಯ ಇಂಜಿನಿಯರ್ (ಸಿವಿಲ್) : 166 ಹುದ್ದೆಗಳು 
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) : 03 ಹುದ್ದೆಗಳು 

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.

ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.33,450- 62,600.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.

ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ. ಪರೀಕ್ಷೆ ಮಾದರಿಯನ್ನು ಈ ಕೆಳಗಿನಂತೆ ಗಮನಿಸಬಹುದು.

  1. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.
  2. ಈ ಪ್ರಶ್ನೆ ಪತ್ರಿಕೆಯನ್ನು ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಕೊಂಡು ಸಿದ್ಧಪಡಿಸಲಾಗುವುದು.
    ಸ್ಪರ್ಧಾತ್ಮಕ ಪರೀಕ್ಷೆ
  3. ಸ್ಪರ್ಧಾತ್ಮಕ ಪರೀಕ್ಷೆಯು ತಲಾ 100 ಅಂಕಗಳಿಗೆ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ.
  4. ಪ್ರತಿ ಪ್ರಶ್ನೆಯು ಋಣಾತ್ಮಕ ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗವನ್ನು ಕಡಿತಗೊಳಿಸಲಾಗುವುದು. ಪ್ರಶ್ನೆ ಪತ್ರಿಕೆ ವಿಷಯ, ಅಂಕಗಳು, ಪರೀಕ್ಷೆ ಸಮಯ ಈ ಕೆಳಗಿನಂತಿದೆ.
  5. ಪತ್ರಿಕೆ – 1: ಸಾಮಾನ್ಯ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)
    ಪತ್ರಿಕೆ – 2: ನಿರ್ದಿಷ್ಟ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17-11-2022
ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಲು ಅಂತಿಮ ದಿನಾಂಕ 18-11-2022

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!