May 28, 2023

ಡಿಸಿಸಿ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 – KDCC Bank Recruitment 2022

ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ನಿಯಮಿತ

KDCC Bank Recruitment 2022: ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು: ಕಿರಿಯ ಗುಮಾಸ್ತರು/ ಕಿರಿಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು  41

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿಯಲ್ಲಿ ಕನಿಷ್ಠ ಶೇಕಡಾ 60ರಷ್ಟು ಗುಣಾಂಕ ಪಡೆದ ಪದವೀಧರರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಓದುವ, ಬರೆಯುವ, ಮಾತನಾಡುವ, ಅರ್ಥಮಾಡಿಕೊಳ್ಳುವ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 – ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಇದನ್ನೂ ಓದಿ – ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಇಲಾಖೆ ನೇಮಕಾತಿ 2022

ಅರ್ಜಿ ಶುಲ್ಕ:
ಪ‌.ಜಾತಿ, ಪ.ಪಂ., ಪ್ರ1 ಅಭ್ಯರ್ಥಿಗಳು ರೂ. 295, ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ. 590 ಅನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಚಾಲ್ತಿ ಖಾತೆಗೆ 122000553848 ಜಮಾಪಡಿಸಿ, ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕೆನರಾ ಡಿ.ಸಿ.ಸಿ ಬ್ಯಾಂಕ್ ಲಿ.,

ಪ್ರಧಾನ ಕಛೇರಿ, ಹೊಸ ಮಾರುಕಟ್ಟೆ, ಶಿರಸಿ – 581 402 (ಉ.ಕ)

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

  • ಮೊದಲನೆಯದಾಗಿ KDCC ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
    ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ:- ವ್ಯವಸ್ಥಾಪಕ ನಿರ್ದೇಶಕರು, ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಚೇರಿ, ಹೊಸ ಮಾರುಕಟ್ಟೆ, ಸಿರ್ಸಿ – 581402, ಉತ್ತರ ಕನ್ನಡ, ಕರ್ನಾಟಕ (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) 10-Sep-2022 ರಂದು ಅಥವಾ ಮೊದಲು (27ನೇ ಅಕ್ಟೋಬರ್ 2022 ವರೆಗೆ ವಿಸ್ತರಿಸಲಾಗಿದೆ).

ಪ್ರಮುಖ ದಿನಾಂಕಗಳು
ಬ್ಯಾಂಕಿನಿಂದ ಅರ್ಜಿ ಫಾರ್ಮ್ ಪಡೆಯಲು ಕೊನೆಯ ದಿನಾಂಕ :  ಸೆಪ್ಟೆಂಬರ್ 08, 2022 ಅಕ್ಟೋಬರ್  20
ಭರ್ತಿ ಮಾಡಿದ ಅರ್ಜಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ :  ಸೆಪ್ಟೆಂಬರ್ 10, 2022  ಅಕ್ಟೋಬರ್  27
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ತಿದ್ದುಪಡಿ ಅಧಿಸೂಚನೆ  ಇಲ್ಲಿ ಕ್ಲಿಕ್ ಮಾಡಿ 

 

Telegram Group
error: Content is protected !!