December 7, 2022

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು : ಸಂಬಳ – ರೂ.17,000-28,950

ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2022 

Chamarajanagar District Court Recruitment : ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group
ಇಲಾಖೆ ಹೆಸರು: ಚಾಮರಾಜನಗರ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ಒಟ್ಟು 11 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಬೆರಳಚ್ಚುಗಾರ – 7
ಬೆರಳಚ್ಚು ನಕಲುಗಾರ – 4 

ವಿದ್ಯಾರ್ಹತೆ:
ಬೆರಳಚ್ಚುಗಾರ ಹುದ್ದೆಗಳಿಗೆ – ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಸುದ್ದಿ – ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ಬೆರಳಚ್ಚು ನಕಲುಗಾರ  ಹುದ್ದೆಗಳಿಗೆ – ಅಭ್ಯರ್ಥಿಗಳು  ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್/ ಸೆಕ್ರೇಟರಿಯೇಟಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ

ಉದ್ಯೋಗ ಸುದ್ದಿ – 10ನೇ ಪಾಸಾದವರಿಗೆ ಭರ್ಜರಿ ನೇಮಕಾತಿ – 24,369 ಹುದ್ದೆಗಳು

ವೇತನಶ್ರೇಣಿ:
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400/-  ರಿಂದ ರೂ.42,000/- ವರೆಗೆ ವೇತನ ಸೂಚಿಸಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
( ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 01, 2022

  • ಮೊದಲನೆಯದಾಗಿ, ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಟೈಪಿಸ್ಟ್, ಟೈಪಿಸ್ಟ್-ನಕಲುದಾರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ – ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಮೇಲೆ ಕೊನೆಯ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಡಿಸೆಂಬರ್ 01, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
Telegram Group
error: Content is protected !!