September 22, 2023

ಡಿಸಿ ಕಚೇರಿಯಲ್ಲಿ ನೇರ ನೇಮಕಾತಿ 2022 – DC Office Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

DC Office Recruitment 2022 – ಗದಗ ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ಸ್‌ ಮತ್ತು ಕ್ಲೀನರ್ಸ್‌ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

Telegram Group

ಇಲಾಖೆ ಹೆಸರು: ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯ DC Office
ಹುದ್ದೆಗಳ ಹೆಸರು: ಕ್ಲೀನರ್, ಲೋಡರ್ 
ಒಟ್ಟು ಹುದ್ದೆಗಳು  58
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್

ಹುದ್ದೆಗಳ ವಿವರ
ಲೋಡರ್ : 47
ಕ್ಲೀನರ್ : 11

ವಿದ್ಯಾರ್ಹತೆ:
ಅಭ್ಯರ್ಥಿಗಳಿಗೆ  ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ಹಾಗೂ ಕನ್ನಡ ಮಾತನಾಡಲು ಗೊತ್ತಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವಯೋಮಿತಿ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17000-28950 ವೇತನ ನೀಡಲಾಗುವುದು.

ಅರ್ಜಿ ಶುಲ್ಕ:
ಜೆನೆರಲ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.300.
ಎಸ್‌ಸಿ / ಎಸ್‌ಟಿ, ಮಹಿಳಾ ಅಭ್ಯರ್ಥಿಗಳಿಗೆ ರೂ.100.
ಅರ್ಜಿ ಶುಲ್ಕವನ್ನು ‘ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಗದಗ’ ಇವರ ಹೆಸರಿಗೆ ಡಿಡಿ ತೆಗೆಯುವ ಮೂಲಕ ಪಾವತಿಸಿ, ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

ಅರ್ಜಿ ಸಲ್ಲಿಸುವ ವಿಧಾನ 
ಅರ್ಜಿಗಳನ್ನು ಹಾಗೂ ಇತರೆ ಹೆಚ್ಚಿನ ಮಾಹಿತಿಗಳನ್ನು ಗದಗ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 123, 1ನೇ ಮಹಡಿ ಅಥವಾ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆಯಬಹುದು. ಅಥವಾ www.gadag.nic.in / www.gadagdudc.mrc.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು.

ಅರ್ಜಿಗಳನ್ನು ದಿನಾಂಕ 28-11-2022 ರ ಸಂಜೆ 05-30 ರೊಳಗಾಗಿ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ, ಗದಗ, ಕೊಠಡಿ ಸಂಖ್ಯೆ 23, 1ನೇ ಮಹಡಿ ಇಲ್ಲಿ ಸಲ್ಲಿಸತಕ್ಕದ್ದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಅರ್ಜಿಗೆ 28-11-2022 ರವರೆಗೆ ಅವಕಾಶ

 

Telegram Group
error: Content is protected !!